Site icon Harithalekhani

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ ಸೋನುಗೌಡ: ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಾಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ? ಎಂದು ಪ್ರಶ್ನೆ

ಬೆಂಗಳೂರು, (ಜೂ.25); ಸ್ಯಾಂಡಲ್‌ವುಡ್ ನಟ ದರ್ಶನ್ ಇದೀಗ ಪವಿತ್ರ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣ ರೇಣುಕಾಸ್ವಾಮಿ ಕೊಲೆ  ಆರೋಪದಡಿಯಲ್ಲಿ ಸಂಬಂಧ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ

ಈ ಬೆನ್ನಲ್ಲೆ ಕೊಲೆಯಾದ ರೇಣುಕಾಸ್ವಾಮಿ ನನಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂದು ಸೋನುಗೌಡ ಹೇಳಿಕೊಂಡಿದ್ದಾರೆ.  ಕನ್ನಡದ ಬಿಗ್​ ರಿಯಾಲಿಟಿ ಬಿಗ್​ಬಾಸ್​ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಶಾಕಿಂಗ್​ ಹೇಳಿಕೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ಮಧ್ಯೆ ನಟ ದರ್ಶನ್ ಜೈಲು ಸೇರಿದ ಹಿನ್ನೆಲೆಯಲ್ಲಿ ಸೋನು ಗೌಡ ಬೇಸರ ಹೊರ ಹಾಕಿದ್ದಾರೆ.  ಹಾಗೂ ಆ ಅಕೌಂಟ್​ನಿಂದ ನನಗೂ ಅಶ್ಲೀಲ ಮೆಸೇಜ್ ಬಂದಿದೆ ಅಂತ ಯ್ಯೂಟೂಬ್​ ಚಾನೆಲ್​ನಲ್ಲಿ ಬೇಸರ ವ್ಕಕ್ತ ಪಡಿಸಿದ್ದಾರೆ.

ಈ ವಿಚಾರವಾಗಿ ಮಾತಾಡಿರುವ ಸೋನು ಗೌಡ, ಈ ಅಕೌಂಟ್​ನಿಂದ ಸಾಕಷ್ಟು ಹುಡುಗಿಯರಿಗೆ ಈತ ಕೆಟ್ಟ ಕೆಟ್ಟದಾಗಿ ಮೆಸೇಜ್​ ಮಾಡಿದ್ದ. ನಾನೂ ನನ್ನ ಫೋನ್​ನಲ್ಲಿ ಚೆಕ್​ ಮಾಡಿದೆ. ಆಗ ನನಗೂ ಆತ ಮೆಸೇಜ್​ ಮಾಡಿದ್ದ. ನನಗೂ ಕೆಟ್ಟದಾಗಿ ಅನೇಕರು ಕಾಮೆಂಟ್ ಮಾಡುತ್ತಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಾಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ? ಎಂದು ಸೋನು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೂ ಮುನ್ನ ಕಿರುತೆರೆ ನಟಿ ಚಿತ್ರಾಲ್ ರಂಗಸ್ವಾಮಿ ಕೂಡ ರೇಣುಕಾಸ್ವಾಮಿ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದರು. ರೇಣುಕಾಸ್ವಾಮಿ ಕ್ರಿಯೆಟ್ ಮಾಡಿದ್ದ ಫೇಕ್ ಅಕೌಂಟ್‌ಗಳಿಂದ ನನಗೂ ಅಶ್ಲೀಲ ಮೆಸೇಜ್ ಬಂದಿತ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version