ನವದೆಹಲಿ, (ಜೂ.25); ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ರಾಯ್ಬರೇಲಿ ಸಂಸದ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಈ ಕುರಿತು ತಿಳಿಸಿದ್ದಾರೆ.
ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಮುನ್ನವೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….