Site icon Harithalekhani

ಸಂಸತ್ತಲ್ಲಿ ಬಿಜೆಪಿಗೆ ಇನ್ನು ಬೆಂಬಲ ಕೊಡಲ್ಲ: ಬಿಜೆಡಿ

ಭುವನೇಶ್ವರ, (ಜೂ.25); ಬಿಜೆಪಿನೇತೃತ್ವದ ಎನ್‌ಡಿಎಸರ್ಕಾರಕ್ಕೆ ಸಂಸತ್ತಿನಲ್ಲಿ ವಿಷಯಾಧಾರಿತ ಬೆಂಬಲ ನೀಡುತ್ತಾ ಬಂದಿದ್ದ ಒಡಿಶಾದ ಬಿಜು ಜನತಾದಳ (ಬಿಜೆಡಿ) ಇದೀಗ ತನ್ನ ನಿಲುವು ಬದಲಿಸಿದೆ. ಇನ್ನು ಸಂಸತ್ತಿನಲ್ಲಿ ಬಿಜೆಪಿಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಬಲಿಷ್ಠ ಹಾಗೂ ಹುರುಪಿನ ವಿಪಕ್ಷವಾಗಿ ಪಕ್ಷ ಕಾರ್ಯ ನಿರ್ವಹಿಸುವುದಾಗಿ ಘೋಷಣೆ ಮಾಡಿದೆ.

ಇತ್ತೀಚೆಗೆ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರು ಬಿಜೆಡಿ ಹೀನಾಯವಾಗಿ ಸೋಲು ಅನುಭವಿಸಿತ್ತು. ಒಡಿಶಾದಲ್ಲಿ 24 ವರ್ಷಗಳಿಂದ ಇದ್ದ ಅಧಿಕಾರವನ್ನು ಕಳೆದುಕೊಂಡಿದ್ದಲ್ಲದೆ, ಲೋಕಸಭೆಯಲ್ಲಿಶೂನ್ಯ ಸಂಪಾದಿಸಿತ್ತು.

ಇದರ ಬೆನ್ನಲ್ಲೇ ರಾಜ್ಯಸಭೆಯ 9 ಸದಸ್ಯರ ಜತೆ ಬಿಜೆಡಿ ಪರಮೋಚ್ಚ ನಾಯಕ ನವೀನ್ ಪಟ್ನಾಯಕ್ ಸೋಮವಾರ ಸಭೆ ನಡೆಸಿ ಈ ಸಂಬಂಧ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಬಿಜೆಡಿ ಅದರ ನೆರವಿಗೆ ನಿಲ್ಲುತ್ತಿತ್ತು. 2019ಹಾಗೂ 2024ರಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಲು ಸಹಕಾರವನ್ನೂ ನೀಡಿತ್ತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version