ದೊಡ್ಡಬಳ್ಳಾಪುರ, (ಜೂ.29); ಕಳ್ಳತನ ಮಾಡಿದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದ ಮೇಲೆ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎರಡು ತಿಂಗಳ ಹಿಂದೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಾಂಗಲ್ಯ ಸರಗಳ್ಳತನಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು ಬಾಬು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಶನಿವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ವೇಳೆ ಹೆಚ್ಚಿನ ವಿಚಾರಣೆಗಾಗಿ ಜುಲೈ.03 ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಇನ್ನೂ ಅರ್ಟಿಕಾ ಬಾಬು ಪರ ವಕೀಲರಾದ ಮಹಮ್ಮದ್ ಮುಮ್ತಾಜ್ ಅವರು ಈ ಕುರಿತು ಮಾಹಿತಿ ನೀಡಿ, ಬಾಬು ಅವರು ಅರ್ಟಿಕಾ ಕಂಪನಿಗೆ 2016ರಲ್ಲಿಯೇ ರಾಜೀನಾಮೆ ಸಲ್ಲಿಸಿದ್ದಾರೆ. ಆದಾಗ್ಯೂ ಪೊಲೀಸರು ವಶಕ್ಕೆ ಪಡೆದಿದ್ದು, ಈ ಹಿಂದೆ 13 ರಿಂದ 15 ಪ್ರಕರಣದಲ್ಲಿ ಅರ್ಟಿಕ ಬಾಬು ಅವರ ಮೇಲೆ ಇದೇ ರೀತಿ ದಾಖಲಿಸಲಾಗಿದ್ದ ಪ್ರಕರಣಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದ ಕುರಿತು ಹೈಕೋರ್ಟಿನ ಮೇಲ್ಮನವಿ ಸಲ್ಲಿಸುತ್ತೇವೆ.
ಪೊಲೀಸರು ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಟಿಕ ಬಾಬು ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದು ತಿಳಿದು ಬಂದ ಕಾರಣ ನ್ಯಾಯಾಧೀಶರು ಚಿಕಿತ್ಸೆ ಕೊಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಪ್ರಸ್ತುತ ಅರ್ಟಿಕ ಬಾಬು ಅವರನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….