ಬಾರ್ಬಡೋಸ್, (ಜೂ.29); ಟಿ-20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ನಿರ್ಣಾಯಕ ಪಂದ್ಯದಲ್ಲಿ ಅಬ್ಬರಿಸಿದ ವಿರಾಟ್ ಕೊಹ್ಲಿ ಅವರ ನೆರವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾಕ್ಕೆ 177 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ 2ನೇ ಓವರ್‌ನಲ್ಲಿ ನಾಯಕ ರೋಹಿತ್ ಶರ್ಮಾ (9 ರನ್) ಹಾಗೂ ರಿಷಬ್ ಪಂತ್ (0) ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ನಂತರ ಬಂದ ಸೂರ್ಯಕುಮಾರ್ ಯಾದವ್ (3 ರನ್) ಕೂಡ ಬೇಗ ಪೆವಲಿಯನ್‌ಗೆ ನಿರ್ಗಮಿಸಿದರು.
ಬಳಿಕ ವಿರಾಟ್ ಕೊಹ್ಲಿ (76 ರನ್, 59 ಎಸೆತ, 6 ಬೌಂಡರಿ, 2 ಸಿಕ್ಸರ್) ಜೊತೆಗೂಡಿದ ಅಕ್ಷರ್ ಪಟೇಲ್ (47 ರನ್, 31 ಎಸೆತ, 1 ಬೌಂಡರಿ, 4 ಸಿಕ್ಸರ್) ತಂಡಕ್ಕೆ 72ರನ್ ಜೊತೆಯಾಟ ಒದಗಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ಶಿವಂ ದುಬೆ (27 ರನ್, 16 ಎಸೆತ, 3 ಬೌಂಡರಿ, 1 ಸಿಕ್ಸರ್) ಬಿರುಸಿನ ಆಟದ ಮೂಲಕ ತಂಡಕ್ಕೆ ನೆರವಾದರು. ಭಾರತ ನಿಗದಿತ 20 ಓವರ್ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 176 ರನ್‌ಗಳಿಸಿತು.
ದಕ್ಷಿಣ ಆಫ್ರಿಕಾ ಪರ ಕೇಶವ್ ಮಹರಾಜ್, ಅನ್ರಿಚ್ ನಾರ್ಟ್ಜೆ ತಲಾ 2 ವಿಕೆಟ್, ಕಗಿಸೊ ರಬಾಡ ಹಾಗೂ ಮಾರ್ಕೊ ಜಾನ್ಸೆನ್ ತಲಾ 1 ವಿಕೆಟ್ ಪಡೆದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….