ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ನೇತೃತ್ವದ ನಿಯೋಗ

ನವದೆಹಲಿ, (ಜೂನ್ 28): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯದ ನಿಯೋಗ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಪ್ರಮುಖ ನೀರಾವರಿ ಯೋಜನೆಗಳು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ  ಹಾಗೂ  ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ   ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. 

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು: ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ  ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್  ಮೆಟ್ರೋ 3 ನೇ ಹಂತದ  44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ  ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

 73.04 ಕಿ.ಮೀ ಉದ್ದದ  ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ. 

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ  ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ  ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು  ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ  ರಾಜ್ಯ ಸರ್ಕಾರ  3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ  ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ  ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ  ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಸಿ.ಮಹಾದೇವಪ್ಪ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="105658"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

50 ವರ್ಷದ ಗೃಹಿಣಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="105638"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!