ಗುಂಡ್ಲುಪೇಟೆ, (ಜುಲೈ.06): ವೃದ್ಧರೋರ್ವರ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 42 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
ಬಸವಾಪುರ ಗ್ರಾಮದ 65 ವರ್ಷದ ಮಹಾದೇವಯ್ಯ ಎಂಬುವವರು ವಯೋಸಹಜ ಕಾರಣದಿಂದ ಶುಕ್ರವಾರ ಮೃತಪಟ್ಟಿದ್ದರು. ಅಂತ್ಯಕ್ರಿಯೆಯ ವೇಳೆ ಉರಿಯುತ್ತಿದ್ದ ಚಿತೆಯ ಶಾಖಕ್ಕೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಅಲ್ಲಿ ನೆರೆದಿದ್ದ 42 ಜನರ ಮೇಲೆ ದಾಳಿ ಮಾಡಿದೆ
ಇದರಲ್ಲಿ 19 ಮಂದಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರನ್ನು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….