ನವದೆಹಲಿ, (ಜುಲೈ 05); ಎರಡು ದಿನಗಳ ಹಿಂದೆಯಷ್ಟೇ ದಿಲ್ಲಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಬಿಜೆಪಿಯ ಹಿರಿಯ ಮುಖಂಡರಾದ ಎಲ್.ಕೆ.ಆಡ್ವಾಣಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ಕುಟುಂಬಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಡ್ವಾಣಿ ಅವರು ಕಳೆದ ಬುಧವಾರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಅಪೋಲೋ ಆಸ್ಪತ್ರೆಯಿಂದ ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಏಮ್ಸ್‌ಗೂ ದಾಖಲಿಸಲಾಗಿತ್ತು.
ಈ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಅಡ್ವಾಣಿ ಅವರ ಕುರಿತು ನಕಾರಾತ್ಮಕ ಸುದ್ದಿಗಳು ಹರದಾಡುತ್ತಿದ್ದು, ಸುಳ್ಳು ಮಾಹಿತಿ ಹರಡದಂತೆ ಅಡ್ವಾಣ ಅವರ ಬೆಂಬಲಿಗರು ಮನವಿ ಮಾಡಿದ್ದಾರೆ.
1941 ರಿಂದ ಆರ್‌ಎಸ್‌ಎಸ್ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಅಡ್ವಾಣಿ, ಜನ ಸಂಘಕ್ಕೆ ಸೇರ್ಪಡೆಗೊಂಡು ರಾಜಕಾರಣ ಪ್ರವೇಶಿಸಿದ್ದರು. ರಾಮಮಂದಿರ ಆಂದೋಲನದ ನೇತೃತ್ವ ವಹಿಸುವ ಮೂಲಕ ದೇಶದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿಕೊಟ್ಟವರಲ್ಲಿ ಆಡ್ವಾಣಿ ಕೂಡ ಪ್ರಮುಖರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….