ಬೆಂಗಳೂರು, (ಜುಲೈ.08); ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ರೈತರ ಆತ್ಮಹತ್ಯೆ ಕುರಿತು ಪತ್ರಿಕಾ ವರದಿಗೆ ಪ್ರತಿಕ್ರಿಯಿಸಿ ಟ್ವಿಟ್ ಮಾಡಿರುವ ಅವರು, ರೈತ ಹಂತಕ ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್‌ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ.
ಪರಿಹರಕ್ಕಾಗಿಯೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅವಹೇಳನ ಮಾಡುತ್ತಾ, ರೈತರಿಗೆ ಸಿಗಬೇಕಾದ ಪರಿಹಾರ ಕೊಡದೇ ಮೀನಮೇಷ ಎಣಿಸುತ್ತಾ ಕಾಲಹರಣ ಮಾಡಿದ ಕಾಂಗ್ರೆಸ್ ಸರ್ಕಾರ ರೈತರನ್ನ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ.
ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….