ಬೆಂಗಳೂರು, (ಜುಲೈ.28): ಸುದ್ದಿಗೋಷ್ಠಿ ವೇಳೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಏಕಾಏಗಿ ಮೂಗಿನಿಂದ ರಕ್ತ ಬಂದಿರುವ ಘಟನೆ ಇಂದು ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಡಾ ಹಗರಣ ಕುರಿತಾಗಿ ಮೈಸೂರಿಗೆ ಪಾದಯಾತ್ರೆ ಕೈಗೊಳ್ಳುವ ರೂಪರೇಷೆಗಳ ಬಗ್ಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ಮೈತ್ರಿ ನಾಯಕರ ಸಭೆ ನಡೆಸಲಾಗಿತ್ತು. ಸಭೆ ನಂತರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಅವರ ಮೂಗಿನಿಂದ ರಕ್ತ ತೊಟ್ಟಿಕ್ಕಿದೆ.
ಕೂಡಲೇ ಸುದ್ದಿಗೋಷ್ಠಿ ಮೊಟಕುಗೊಳಿಸಿದ ಕುಮಾರಸ್ವಾಮಿ ಅವರನ್ನು ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದರಿಂದ ಕೆಲಕಾಲ ಜೆಡಿಎಸ್ ಕಾರ್ಯಕರ್ತರು ಆತಂಕಕ್ಕೆ ಒಳಗಾದರು.
ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….