ಬೆಂಗಳೂರು, (ಆಗಸ್ಟ್.02); ಮೈಸೂರು ಚಲೋ ಪಾದಯಾತ್ರೆ ಕೇವಲ ರಾಜಕೀಯ ಹೋರಾಟವಲ್ಲದೆ, ಇದು ಭ್ರಷ್ಟಾಚಾರದ ವಿರುದ್ಧದ ದಂಡಯಾತ್ರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮೈಸೂರು ಪಾದಯಾತ್ರೆಗೆ ಬೆಂಬಲವಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆಕ್ರೋಶದಿಂದ ಗೊಂದಲಕ್ಕೆ ಸಿಲುಕಿದ್ದ ಆರ್.ಅಶೋಕ್, ವಿಜಯೇಂದ್ರ ಮತ್ತು ಕೇಂದ್ರದ ವರಿಷ್ಠರು ಕುಮಾರಸ್ವಾಮಿ ಅವರ ಮನವೊಲಿಸಿ, ಪ್ರೀತಂ ಗೌಡಗೆ ಪ್ರಾಧಾನ್ಯತೆ ನೀಡದೆ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರು ಚಲೋ ಪಾದಯಾತ್ರೆ ಎಂಬ ಸಂದೇಶದ ಬಳಿಕ ಇಂದು ಆರ್.ಅಶೋಕ್ ಪಾದಯಾತ್ರೆ ಕುರಿತು ಟ್ವಿಟ್ ಮಾಡಿದ್ದಾರೆ.
ಮೈಸೂರು ಚಲೋ ಪಾದಯಾತ್ರೆ ಕೇವಲ ರಾಜಕೀಯ ಹೋರಾಟವಲ್ಲದೆ, ಇದು ಭ್ರಷ್ಟಾಚಾರದ ವಿರುದ್ಧದ ದಂಡಯಾತ್ರೆ, ಆರೂವರೆ ಕೋಟಿ ಕನ್ನಡಿಗರ ಜನಕ್ರೋಶಕ್ಕೆ ದನಿಗೂಡಿಸುವ ಪ್ರಜಾಯಾತ್ರೆ.
ಅನೈತಿಕತೆಯ ವಿರುದ್ಧ ನೈತಿಕತೆಯ ಮೌನಯಾತ್ರೆ, ಅಧರ್ಮ ರಾಜಕಾರಣದ ವಿರುದ್ಧ ಧರ್ಮ ರಾಜಕಾರಣದ ಸಂಘರ್ಷ ಯಾತ್ರೆ, ಅಸತ್ಯದ ವಿರುದ್ಧ ಸತ್ಯದ ನ್ಯಾಯ ಯಾತ್ರೆ.
ಸಿಎಂ ಸಿದ್ದರಾಮಯ್ಯ ನವರ ಅಕ್ರಮಗಳ ವಿರುದ್ಧ ಎನ್ ಡಿ ಎ ಮಿತ್ರ ಕೂಟ ನಡೆಸಿರುವ ಜನಾಂದೋಲನಕ್ಕೆ ನಾಳೆ, ಶನಿವಾರ ಅಗಸ್ಟ್ 3ರಂದು ಚಾಲನೆ ಸಿಗಲಿದೆ.
ಸಿಎಂ ಸಿದ್ದರಾಮಯ್ಯನವರೇ, ಈಗಲೂ ಕಾಲ ಮಿಂಚಿಲ್ಲ. ತಮಗೆ ಕಿಂಚಿತ್ತಾದರೂ ನೈತಿಕತೆ, ಆತ್ಮಸಾಕ್ಷಿ, ಅಂತಃಕರಣ ಅನ್ನುವುದು ಇದ್ದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ.
ಈಗ ಪ್ರಾಯಶ್ಚಿತ ಮಾಡಿಕೊಳ್ಳದಿದ್ದರೆ ಮುಂದೆ ಪಶ್ಚಾತ್ತಾಪಕ್ಕೂ ಅವಕಾಶ ಇರುವುದಿಲ್ಲ ಎಂದು ಆರ್.ಅಶೋಕ್ ವಾರ್ನಿಂಗ್ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….