ನಂಜನಗೂಡು, (ಆಗಸ್ಟ್.04); ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ.
ಬಸವಣ್ಣ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಿಗ್ಗೆಯಿಂದ ಸರಿ ಸುಮಾರು ನಾಲ್ಕು ಗಂಟೆಯವರೆಗೂ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸಿ ಮನೆಗೆ ತೆರಳಲು ಮುಂದಾದಾಗ ಮೇವು ಕಟಾವು ಮಾಡಲು ಜಮೀನಿನ ಒಳಭಾಗಕ್ಕೆ ತೆರಳಿದೆ ಏಕಾಏಕಿ ಹಡವಿ ಕುಳಿತಿದ್ದ ಚಿರತೆ ನನ್ನ ಮೇಲೆ ಹೆಗರಿತು.
ಗಾಬರಿಯಾಗಿ ಚಿರಾಟ ಮಾಡಿದ ಬಳಿಕ ರೈತನ ಬಿಟ್ಟಿದೆ ಎಂದು ಗಾಯಗೊಂಡು ಆಸ್ಪತ್ರೆ ಸೇರಿರುವ ರೈತ ಅಳಲು ತೋಡಿಕೊಂಡರು.
ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮತ್ತು ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….