ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ; ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಹೆದರಲ್ಲ: ರೊಚ್ಚಿಗೆದ್ದ ಸಿಎಂ ಸಿದ್ದರಾಮಯ್ಯ

ಮೈಸೂರು, (ಆಗಸ್ಟ್.09): ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. 

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. 

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು. 

ದೇವರಾಜ ಅರಸು, ಬಂಗಾರಪ್ಪ  ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು. 

ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ  ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು. 

ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಘಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ ಎಂದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು SIT ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು SIT ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ SIT ಯವರು ತನಿಖೆ ನಡೆಸಿದ್ದಾರೆ. ಆದರೂ  ED ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು. 

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು. 

ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು. 

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು.

15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ ಎಂದರು.

ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ ಎಂದು ಪ್ರಶ್ನಿಸಿದರು. 

ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮೂಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು. 

ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು.

ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
Doddaballapura: ಕೋಡಿ ಬಿದ್ದ ಗೌಡನಕೆರೆ..!| Video

Doddaballapura: ಕೋಡಿ ಬಿದ್ದ ಗೌಡನಕೆರೆ..!| Video

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಂಚಗಿರಿ ಶ್ರೇಣಿಗಳಲ್ಲಿ ಒಂದಾದ ಚನ್ನರಾಯಸ್ವಾಮಿ ಬೆಟ್ಟದ ತಪ್ಪಲಿನ ಗೌಡನಕೆರೆ ಸೋಮವಾರ ರಾತ್ರಿ ಸುರಿದ ಮಳೆಗೆ ಕೋಡಿ ಬಿದ್ದಿದೆ. doddaballapura rain ಈ ಕೆರೆಗೆ ಹೆಚ್ಚಿನ ನೀರು ಹರಿದು ಬರುವುದೇ ಬೆಟ್ಟದ ಮೇಲೆ

[ccc_my_favorite_select_button post_id="94701"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ ರೋಧನೆ

News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ

ಬೆಂಗಳೂರು: ನೀರು ತರಲು ಹೋಗಿದ್ದ ವೇಳೆ ಆಯತಪ್ಪಿ ಕೆಂಗೇರಿ (Kengeri) ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಮೊದಲಿಗೆ ಅಣ್ಣ ಜಾನ್ಸನ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ

[ccc_my_favorite_select_button post_id="94698"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!