ಮುಧೋಳ, (ಆಗಸ್ಟ್.11); ಬಸ್ ಚಾಲನೆ ವೇಳೆ ಚಾಲಕನಿಗೆ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಹೊಲಕ್ಕೆ ನುಗ್ಗಿರುವ ಘಟನೆ ಶಿರೋಳ ಗ್ರಾಮದ ಬಳಿ ನಡೆದಿದೆ.
ವಿಜಯಪುರದಿಂದ ಅಂಕೋಲಕ್ಕೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಜಮಖಂಡಿಯಿಂದ ಮುಧೋಳಕ್ಕೆ ಬರುವ ವೇಳೆ ಶಿರೋಳ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನಿಗೆ ತಲೆ ಸುತ್ತು ಬಂದಿದೆ. ಕೂಡಲೇ ಚಾಲಕ ಬಸ್ ನ್ನು ಹೊಲಕ್ಕೆ ನುಗ್ಗಿಸಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ತಲೆಸುತ್ತು ಬಂದರೂ ಕರ್ತವ್ಯ ಪ್ರಜ್ಞೆ ಮೆರೆದ ಚಾಲಕ ಬಸನ್ನು ಹೊಲಕ್ಕೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಪ್ರಯಣಿಕರಿಗೆ ಬದಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….