ಕೊಪ್ಪಳ, (ಆಗಸ್ಟ್.12); ತುಂಗಭದ್ರಾ ಡ್ಯಾಂ ರೈತರ ಜೀವನಾಡಿಯಾಗಿದೆ. ರಾಜ್ಯದ ರೈತರ ಪರವಾಗಿ ಸರ್ಕಾರ ನಿಲ್ಲಬೇಕು. ಡಿಕೆ ಶಿವಕುಮಾರ್ ಅಧಿಕಾರಿಗಳನ್ನ ಹೊಣೆ ಮಾಡಲ್ಲ ಅಂತಾರೆ. ರಾಜ್ಯ ಸರ್ಕಾರವೇ ಇದರ ಹೊಣೆ ಹೊರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಸರ್ಕಾರ ಚೀಫ್ ಇಂಜಿನಿಯರ್ ನೇಮಕ ಮಾಡಿಲ್ಲ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಜ್ಞರು ನೀಡಿದ ಯೋಜನೆ ಅನುಷ್ಠಾನ ಮಾಡಿಲ್ಲ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರದ ಹೊಣೆಗೇಡಿತನದಿಂದ ಈ ಘಟನೆ ಸಂಭವಿಸಿದೆ. ಪ್ರತಿ ಹೆಕ್ಟರ್ ಗೆ ತಲಾ 50,000 ನೀಡಬೇಕು. ತುಂಗಭದ್ರ ಡ್ಯಾಂ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿಯಾಗಿದೆ.
ಕಳೆದ ಬಾರಿ ಬರಗಾಲದಿಂದ ರೈತರು ಕಂಗಾಲಾಗಿದ್ದರು. ಈ ಬಾರಿ ಎರಡು ಬೆಳೆ ಬೆಳೆಯಬಹುದು ಅಂತ ರೈತರು ಸಂತಸದಿಂದ ಇದ್ದರು. ಈಗ ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿಕೊಂಡು ಹೋಗಿದ್ದು, ಇದರಿಂದ ಈ ಭಾಗದ ರೈತರಿಗೆ ಆಘಾತ ಉಂಟಾಗಿದೆ ಎಂದು ಹೇಳಿದರು
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….