ಬಾಂಗ್ಲಾದೇಶದಲ್ಲಿ ಹಿಂದೂಗಳ ಮಾರಣಹೋಮ ಆಗ್ತಾ ಇದ್ದರೂ ಪ್ರಧಾನಿ ಮೋದಿ ಬಾಯೇ ಬಿಡ್ತಾ ಇಲ್ಲ..!; ಪ್ರಮೋದ್ ಮುತಾಲಿಕ್ ವಾಗ್ದಾಳಿ

ಬೆಂಗಳೂರು, (ಆಗಸ್ಟ್.12); ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಅವರ ಆಸ್ತಿ-ಪಾಸ್ತಿ, ಮಂದಿರಗಳ ಮೇಲಿನ ದಾಳಿ ಕುರಿತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ರಕ್ಷಣೆಗೆ ನಿಲ್ಲದೆ ಸುಮ್ಮನಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶ್ರೀ ರಾಮ ಸೇನೆವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಿಂದೂಗಳು, ಶ್ರೀ ರಾಮನನ್ನು ನಂಬಿ ಅಧಿಕಾರಕ್ಕೆ ಬಂದ ಪಕ್ಷ, ಆದರೆ ಇದೀಗ ನೆರೆಯ ರಾಷ್ಟ್ರದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೂ ಕೂಡ ಕೈಕಟ್ಟಿ ಕುಳಿತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬಾಂಗ್ಲಾದಲ್ಲಿ ನಮ್ಮ ಸಮುದಾಯವನ್ನು ನಾಶ ಮಾಡಲು ಹೊರಟಿದ್ದಾರೆ. ಕನಿಷ್ಠ ಎಚ್ಚರಿಕೆ ಕೊಡಲು ಮೋದಿ ಸರ್ಕಾರಕ್ಕೆ ಆಗ್ತಾ ಇಲ್ಲ ಅಂದ್ರೆ ಏನ್ ಅರ್ಥ..? ಇವತ್ ಬಾಂಗ್ಲಾ, ನಾಳೆ ಪಶ್ಚಿಮ ಬಂಗಾಳ, ನಾಡಿದ್ದು ದೆಹಲಿ, ಆಚೆ ನಾಡಿದ್ದು ಕರ್ನಾಟಕ… ಎಷ್ಟಂತ ಸಹಿಸಬೇಕು..? ಹಿಂದೂಗಳ ರಕ್ಷಣೆ ಮಾಡಬೇಕಾದವರು ಯಾರು ಎಂದು ಪ್ರಮೋದ್ ಮುತಾಲಿಕ್ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಈ ಹಿಂದೆ ಶ್ರೀಮತಿ ಇಂದಿರಾ ಗಾಂಧಿಯವರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಇದೇ ರೀತಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದಾಗ, ಪಾಕಿಸ್ತಾನವನ್ನು ತುಂಡರಿಸಿ ಬಾಂಗ್ಲಾದೇವನ್ನು ರಚಿಸಿದರು. ಅಂತೆಯೇ ತ್ವರಿತವಾಗಿ ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು ಅಂತ ನಾವು ಬಯಸುತ್ತಿದ್ದೇವೆ.

ಎಷ್ಟಂತ ಸಹಿಸುವುದು, ಓಟಾಕಿದ್ದೀವಿ, ಅಧಿಕಾರಕ್ಕೆ ತಂದಿದ್ದೀವಿ.. ಆದರೂ ನಮ್ಮವರೇ ಸಾಯುತ್ತಿದ್ದಾರೆ.. ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ. ಮೋದಿ ಅವರೇ ನಿಮ್ಮ ಕಡೆ ಇಡೀ ದೇಶ ನೋಡ್ತಾ ಇದೆ. ಆ ಹೆಣ್ಣುಮಕ್ಕಳ ಅಳಲು ನಿಮಗೂ ಕೇಳುಸ್ತಾ ಇದೆ. ಹೆಣ್ಣುಮಕ್ಕಳ ರಕ್ತಪಾತ ನಿಮಗೂ ಗೊತ್ತಾಗ್ತಾ ಇದೆ. ಆದರೂ ಕೂಡ ಬಾಯಿ ಬಿಡ್ತಾ ಇಲ್ಲಾ.. ಕನಿಷ್ಠ ಎಚ್ಚರಿಕೆ ಕೋಡ್ತಾಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕರ್ನಾಟಕ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮೂಲಕ ಮೋದಿ ಸರ್ಕಾರಕ್ಕೆ, ಕೇಂದ್ರ ಸರಕಾರಕ್ಕೆ ಒಂದು ಸಂದೇಶ ಕೊಡಲು ಇದು ಆರಂಭ. 

ಒಂದು ವೇಳೆ ಕೇಂದ್ರ ಹಿಂದೂಗಳ ರಕ್ಷಣೆಗೆ ಹಿಂದೇಟು ಹಾಕಿದರೆ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ಮುತಾಲಿಕ್ ನೀಡಿದರು.

ಈ ವೇಳೆ ಮುಖಂಡರಾದ ಸುಂದರೇಶ್, ಅಮರನಾಥ್, ಗಂಗಾಧರ್, ಕುಲಕರ್ಣಿ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವ H.D.Kumaraswamy

[ccc_my_favorite_select_button post_id="105039"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!