ದೊಡ್ಡಬಳ್ಳಾಪುರ, (ಆಗಸ್ಟ್.16); ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ದೇವಾಲಯದಲ್ಲಿ ಇಂದು ಮಹಿಳೆಯರಿಗೆ ಅರಿಶಿಣ-ಕುಂಕುಮ ಮತ್ತು ಬಳೆ ಪ್ರಸಾದವನ್ನು ವಿತರಿಸಲಾಯಿತು.
ರಾಜ್ಯ ಸರ್ಕಾರದ ಆದೇಶದ ಅನ್ವಯ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೇವರ ಪೂಜೆ ಬಂದ ಮಹಿಳೆಯರಿಗೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಂ ನಾರಾಯಣಸ್ವಾಮಿ ಅರಿಶಿಣ-ಕುಂಕುಮ ಮತ್ತು ಬಳೆ ಪ್ರಸಾದವನ್ನು ವಿತರಿಸಿದರು.
ಈ ವೇಳೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಆರ್.ಸುಬ್ರಹ್ಮಣ್ಯ, ಸಿಬ್ಬಂದಿ ನಂಜಪ್ಪ ಸೇರಿದಂತೆ ದೇವಾಲಯದ ಸಿಬ್ಬಂದಿ ಹಾಜರಿದ್ದರು.
ಇದೇ ವೇಳೆ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….