ದೊಡ್ಡಬಳ್ಳಾಪುರ, (ಆಗಸ್ಟ್.17); ಕೋಲ್ಕತ್ತಾದ ಆರ್.ಜಿ.ಕಾರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ, ಈ ಪ್ರಕರಣವನ್ನು ಖಂಡಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರ ಮೇಲೆ ಗುಂಪು ದಾಳಿ ಮತ್ತು ತೀವ್ರ ವಿಧ್ವಂಸಕ ಕೃತ್ಯವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ಆ.17 ದೇಶಾದ್ಯಂತ ಹೊರರೋಗಿ ಸೇವೆಗಳನ್ನು ಬಂದ್ ಮಾಡುವುದಾಗಿ ಘೋಷಿಸಿದೆ.
ಐ.ಎಂ.ಎ ಕರೆ ನೀಡಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಬೆಂಬಲಿಸಿ ದೊಡ್ಡಬಳ್ಳಾಪುರದ ಹಲವಾರು ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳು ಹೊರ ರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಿವೆ.
ವಿನಾಕಾರಣ ವೈದ್ಯರು ಹಿಂಸೆಗೆ ಬಲಿಯಾಗುವಂತಾಗಿದೆ. ವೈದ್ಯರಿಗೆ ಆಸ್ಪತ್ರೆ ಮತ್ತು ಕ್ಯಾಂಪಸ್ಗಳಲ್ಲಿ ಭದ್ರತೆ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ವೈದ್ಯರು,ಶುಶ್ರೂಷಕರು ಹಾಗೂ ಇತರ ಆರೋಗ್ಯ ಕಾರ್ಯಕರ್ತರ ಬೇಡಿಕೆಗಳನ್ನು ನೋಡಿಕೊಳ್ಳುವ ಅಧಿಕಾರಿಗಳ ನಿರಾಸಕ್ತಿಯಿಂದಾಗಿ ದೈಹಿಕ ಹಲ್ಲೆ, ಅಪರಾಧಗಳು ನಡೆಯುತ್ತಿವೆ.
ಇಂತಹ ಘಟನೆಗಳು ಮರುಕಳಿಸದಂತೆ, ಪ್ರತಿಭಟನೆ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಮಾಹಿತಿ ನೀಡಿರುವ ಶ್ರೀರಾಮ ಆಸ್ಪತ್ರೆಯ ನಿರ್ದೇಶಕ ಡಾ.ಎಚ್.ಜಿ.ವಿಜಯಕುಮಾರ್ ಆ.17 ರಂದು ಬೆಳಿಗ್ಗೆ 6 ಗಂಟೆಯಿಂದ ಆ.18 ರ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿಗಳ ಚಿಕಿತ್ಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….