ದೇವನಹಳ್ಳಿ, (ಆಗಸ್ಟ್.18); ವಾರಾಂತ್ಯದ ಹಿನ್ನೆಲೆಯಲ್ಲಿ ನಂದಿ ಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರಾಸೆ ಎದುರಾಗಿದ್ದು, ಮರದ ಟೊಂಗೆ ಬಿದ್ದು ರಸ್ತೆ ಬಂದ್ ಆಗಿದೆ ಇದರಿಂದಾಗಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಪರದಾಡುವಂತಾಗಿದೆ.
ಭಾನುವಾರಷ ರಜೆ ಹಿನ್ನೆಲೆಯಲ್ಲಿ ಜಾಲಿಯಾಗಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿಗರಿಗೆ ದಾರಿ ಮಧ್ಯೆ ನಿರಾಸೆ ಕಾದಿದೆ. ಟ್ರಾಫಿಕ್ ಜಾಮ್ ನಿಂದಾಗಿ ಬೆಟ್ಟದ ಮೇಲೆ ಹೋಗಲು ಆಗದೆ ಮತ್ತು ಬೆಟ್ಟದ ಮೇಲೆ ಹೋದವರು ಕೆಳಗೆ ಬರಲು ಆಗದೆ ಪರದಾಡಿದರು.
ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜನರು ಪ್ರವಾಸಕ್ಕೆ ಬರುತಿದ್ದು, ಕಳೆದ 2-3 ದಿನಗಳಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ತೆರಳುತ್ತಿದ್ದಾರೆ.
ಭಾನುವಾರ ಬೆಳ್ಳಂ ಬೆಳಗ್ಗೆ ನಂದಿಗಿರಿಧಾಮಕ್ಕೆ ತೆರಳುತ್ತಿದ್ದ ಜನರಿಗೆ ನಿರಾಸೆಯಾಗಿದೆ. ಕಿಲೋಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ನಲ್ಲಿ ವಾಹನ ಸವಾರರು ಪರದಾಡಿದರು.
ನಂದಿಗಿರಿಧಾಮಕ್ಕೆ ತೆರಳುವ ರಸ್ತೆಯಲ್ಲಿ ಮರದ ಟೊಂಗೆ ಬಿದ್ದು ರಸ್ತೆ ಬಂದ್ ಆಗಿದೆ. ಇದರಿಂದ ವಾಹನಗಳು ಬೆಟ್ಟದ ಮೇಲೆ ಹೋಗಲಾಗದೆ, ಕೆಳಗೆ ಬರಲಾಗದೆ ರಸ್ತೆಯಲ್ಲೇ ನಿಂತಿವೆ. ಇದರಿಂದ ಐದಾರು ಕಿಮೀವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ನಂದಿಗಿರಿಧಾಮದ ಮೇಲೆ ಹೋಗಲಾಗದೆ ಪ್ರವಾಸಿಗರು ಪರದಾಡುತ್ತಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಪ್ರವಾಸಿಗರು ರಸ್ತೆಯಲ್ಲಿ ಕಾಯುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….