ಬೆಂಗಳೂರು, (ಆಗಸ್ಟ್.19); ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.
ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.
ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….