ಹಾಸನ, (ಆಗಸ್ಟ್.19); ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ನಿಂತಿದ್ದ ಬರೋಬ್ಬರಿ ಹದಿನೇಳು ಬೈಕ್‌ಗಳಿಗೆ ಗುದ್ದಿರುವ ಘಟನೆ ಅರಸೀಕೆರೆ ತಾಲೂಕಿನ ಬಾಣಾವರ ಬಳಿ ನಡೆದಿದೆ.
ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಹಿನ್ನಲೆ ದ್ವಿಚಕ್ರ ವಾಹನ ಸವಾರರು ತಮ್ಮ ಬೈಕ್‌ಗಳನ್ನು ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದರು, ಈ ವೇಳೆ ಅತಿ ವೇಗವಾಗಿ ಬಂದ ಫಾರ್ಚೂನರ್ ಕಾರೊಂದು ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿ ನಂತರ ಬಸ್ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ.
ಪರಿಣಾಮ ಓರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….