ಬೆಂಗಳೂರು, (ಆಗಸ್ಟ್.19): ಇಲಿ ಔಷಧ ಸಿಂಪಡಣೆಯಿಂದಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಗರದ ಆದರ್ಶ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಈ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
19 ವಿದ್ಯಾರ್ಥಿಗಳ ಪೈಕಿ ಮೂವರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಉಳಿದವರು ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆನ್ನಲಾಗಿದೆ.
‘ಇಲಿ ಔಷಧ ಸಿಂಪಡಣೆ ಮಾಡಿದ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 286 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….