ಕಾಂಗ್ರೆಸ್ ಸರ್ಕಾರ ಅಸಮಾನತೆ ತೊಲಗಿಸುವ ಕಾರ್ಯಕ್ರಮ ರೂಪಿಸಿದರೆ ಬಿಜೆಪಿ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್‌ 20); ರಾಜೀವಗಾಂಧಿ ಹಾಗೂ ದೇವರಾಜ ಅರಸರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿದರು.

ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ ಕನಸನ್ನು ಕಂಡಿದ್ದರು. ಯುವಜನತೆಯ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದರು.

ಅವರು ದೇಶದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಕಾರಣಕರ್ತರಾಗಿದ್ದರು. ಯಾವಾಗಲೂ ಸಾಮಾಜಿಕ ನ್ಯಾಯದ ಪರವಿದ್ದರು. ದೇಶದಲ್ಲಿ ಬದಲಾವಣೆ ಆಗಬೇಕು. ಸಮಾನ ಅವಕಾಶ ಸಿಗಬೇಕು ಎಂದು ಹಂಬಲಿಸಿದರು. ಯಾವುದೇ ಜಾತಿ, ಧರ್ಮ, ಭಾಷೆ, ಪ್ರಾದೇಶಿಕತೆ ಭೇದ ಮರೆತು, ಎಲ್ಲೇ ಇದ್ದರೂ ಭಾರತೀಯರು ಒಗ್ಗಟ್ಟಾಗಿರಬೇಕು ಎಂಬ ಕನಸನ್ನು ಕಂಡಿದ್ದರು.

ವಿಶೇಷವಾಗಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಪಾಲು ಸಿಗಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಸಂವಿಧಾನಕ್ಕೆ 73 ಮತ್ತು 74 ನೇ ತಿದ್ದುಪಡಿ ಜಾರಿಗೆ ತಂದರು. ಈ ದೇಶದಲ್ಲಿ ಏನಾದರೂ ಮಹಿಳೆಯರಿಗೆ ರಾಜಕೀಯದಲ್ಲಿ ಪಾಲು ಸಿಕ್ಕಿದ್ದರೆ, ಸಂವಿಧಾನಕ್ಕೆ ತಂದ ಈ ತಿದ್ದುಪಡಿಗಳು ಕಾರಣ ಎಂದು ಹೇಳ ಬಯಸುತ್ತೇನೆ ಎಂದರು.

ಭಾರತೀಯ ಜನತಾ ಪಕ್ಷದವರು ತಾವು ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡವರ ಪರ ಎಂದು ಎಷ್ಟೇ ಹೇಳಿಕೊಂಡರೂ, ಅವರು ಬಡವರು , ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರ ಇರಲು ಸಾಧ್ಯವೇ ಇಲ್ಲ. ಬಡವರಿಗೆ ಅವರು ಯಥಾ ಸ್ಥಿತಿಯಲ್ಲಿರಬೇಕು. ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಬಾರದು ಎಂದು ಬಯಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಾಯಿ ಮಾತೇ ಬೇರೆ, ಕೃತಿಯೇ ಬೇರೆ.ಇವತ್ತು ದೇಶದ ಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿಗೆ ರಾಜೀವ ಗಾಂಧಿಯವರು ಕಾರಣ. ರಾಜೀವ ಗಾಂಧಿಯವರು ಯುವ ಶಕ್ತಿ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದ್ದರಿಂದ ಮತದಾನದ ವಯಸ್ಸು 21 ರಿಂದ 18 ಕ್ಕೆ ಇಳಿಸಿದರು. ಅವರು ಇನ್ನೂ ಬದುಕಿರಬೇಕಾಗಿತ್ತು. ಅವರು ಇದ್ದಿದ್ದರೆ ದೇಶದಲ್ಲಿ ನಿಜವಾದ ಬದಲಾವಣೆ ಆಗಿರುತ್ತಿತ್ತು. ದೂರದೃಷ್ಟಿ, ದೇಶ, ಸಮಾಜದ ಬಗ್ಗೆ ಕಾಳಜಿ ಇದ್ದವರು, ಬಹಳ ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಅಗಲಿದರು ಎಂದು ವಿಷಾದಿಸಿದರು.

ದೇವರಾಜ ಅರಸು ಅವರು 1972 ರಿಂದ ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. 

ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗದ ರಚನೆ ಮಾಡಿ, ಹಿಂದುಳಿದವರಿಗೆ ಶಿಕ್ಷಣ ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು; ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನ ಸೌಧ ಪ್ರವೇಶಿಸುವಂತೆ ಮಾಡಿದರು ಎಂದರು.

ಈ ಕುರಿತು ಪತ್ರಿಕೆಯಲ್ಲಿ ಓದಿದ ಘಟನೆಯೊಂದನ್ನು ನೆನಪಿಸಿ ಕೊಂಡ ಮುಖ್ಯಮಂತ್ರಿಗಳು, “ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್‌ ಷರೀಫ್‌ ಅವರಿಗೆ ಟಿಕೆಟ್‌ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್‌ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್‌ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಉತ್ತರಿಸಿದರಂತೆ” ಎಂದು ತಾವು ಓದಿದ್ದನ್ನು ಸ್ಮರಿಸಿದರು.

ಮಲ ಹೊರುವ ಪದ್ಧತಿ, ಜೀತ ಪದ್ಧತಿ ನಿಷೇಧ, ಸಾಲ ಮನ್ನಾ ಇಂತಹ ಅನೇಕ ಪ್ರಗತಿ ಪರ ಕಾನೂನುಗಳನ್ನು ಮಾಡಿದ ಅವರು, ಅರಸು ಮನೆತನದಲ್ಲಿ ಹುಟ್ಟಿದರೂ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದರು.

ಅಂತೆಯೇ ಕಾಂಗ್ರೆಸ್‌ ಪಕ್ಷ ಅಸಮಾನತೆಯನ್ನು ಹೋಗಲಾಡಿಸಲು ಬಯಸುತ್ತದೆ. ಈಗಲೂ ಅಸಮಾನತೆ ವಿರುದ್ಧ ಹೋರಾಟ ಮಾಡುತ್ತಿದೆ. ಅದಕ್ಕೆ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ. ಅಸಮಾನತೆ ವಿರುದ್ಧ ಕಾರ್ಯಕ್ರಮ ನೀಡುತ್ತೇನೆಂಬ ಕಾರಣಕ್ಕೇ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ ಎಂದು ತಿಳಿಸಿದರು. 

ಈಗ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]