ಬೆಂಗಳೂರು, (ಆಗಸ್ಟ್.20); ನಗರದಲ್ಲಿ ಆ.23ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ನ್ನು ಘೋಷಿಸಿದೆ.
ರಾಜ್ಯದಾದ್ಯಂತ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಪೂರ್ವ ಅರಬ್ಬಿ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲಿನ್ಸ್ ದ್ವೀಪದ ವರೆಗೆ 1.5 ಮತ್ತು 1.8 ಕಿ.ಮೀ. ಟರ್ಫ್ ಇರುವುದರಿಂದ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ.
ಜತೆಗೆ ಬೆಂಗಳೂರಿನಲ್ಲಿಯೂ ಭಾರಿ ಮಳೆ ಮುನ್ಸೂಚನೆಯಿದೆ. ಮುಖ್ಯವಾಗಿ ಆ.19 ಮತ್ತು ಆ.20 ರಂದು ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿಯೂ ಆಗಸ್ಟ್ 19 ರಿಂದ 23 ರ ವರೆಗೆ ಮಳೆ ಸಾಧ್ಯತೆ ಭಾರೀ ಮಳೆ ಸಾಧ್ಯತೆಯಿದೆ. ಈ ಉತ್ತರ ಒಳನಾಡಿದ ಜಿಲ್ಲೆಗಳಿಗೆ ಆಗಸ್ಟ್ 19ರಂದು ಸಂಜೆ ವೇಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಈ ಐದು ದಿನಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….