ಬೆಂಗಳೂರು, (ಆಗಸ್ಟ್.20); ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 25,000 ರೂ.ನಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ, ಬೆದರಿಕೆಗಳ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಕುರಿತು ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಈ ಹಿಂಸಾತ್ಮಕ ಚಟುವಟಿಕೆಗಳ ವಿರುದ್ಧ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕಟ್ಟು ನಿಟ್ಟಿನ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ರಾಜ್ಯದಲ್ಲಿ ವೈದ್ಯರ ಮೇಲಿನ ಹಲ್ಲೆ, ದೌರ್ಜನ್ಯವನ್ನುತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ವಿಧಾನಮಂಡಲ ಅಧಿವೇಶನದ ವೇಳೆ ವೈದ್ಯಕೀಯ ನೋಂದಣಿ & ಕಾನೂನುಗಳಿಗೆ ತಿದ್ದುಪಡಿ ತಂದು ಕಾನೂನುಗಳನ್ನು ಬಲಪಡಿಸಲಾಗಿದೆ.
ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ ಗರಿಷ್ಠ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 25,000 ರೂ.ನಿಂದ 2 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ದೈಹಿಕ ದೌರ್ಜನ್ಯದ ಜೊತೆಗೆ ಸಾಮಾಜಿಕ ಜಾಲತಾಣದ ಮೂಲಕ ಅವಹೇಳನ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ. ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….