ನೆಲಮಂಗಲ, (ಆಗಸ್ಟ್.21); ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ.
ದಾಸನಪುರ ಹೋಬಳಿ ಸೊಂಡೆಕೊಪ್ಪ ಬಳಿ ಇರುವ ಬಿಕೆ ನಗರದಲ್ಲಿ ವಾಸವಾಗಿದ್ದ ಹುಡುಗರು ಮಂಗಳವಾರ ರಾತ್ರಿ ಬಹಿರ್ದೆಸೆಗೆ ಹೋಗಿ ನೀರಿನ ಹೊಂಡಕೆ ಬಿದ್ದು ಮೃತ ಪಟ್ಟಿದ್ದಾರೆ.
ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಕುವಿನಿಂದ ಹಲ್ಲೆ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಹೆಬ್ಬಾಳದ ಎಸ್‌ಎಸ್‌ವಿ ರಸ್ತೆಯಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಮದನ್, ನಿತಿನ್ ಹಾಗೂ ಪ್ರಕಾಶ್ ಎಂಬವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ವಿಕ್ರಮ್ ಎಂದು ಗುರುತಿಸಲಾಗಿದೆ.
ಟ್ರಾಫಿಕ್‌ನಲ್ಲಿ ವಾಹನ ಚಲಾಯಿಸುವಾಗ ಬೈಕ್ ತಾಗಿದೆ ಎಂದು ಕಿಡಿಗೇಡಿಗಳು ವಿಕ್ರಮ್ ಬಳಿ ಗಲಾಟೆ ಮಾಡಿದ್ದಾರೆ. ಬಳಿಕ ಬೈಕ್‌ನಲ್ಲಿ ತೆರಳುತ್ತಿದ್ದ ಆತನನ್ನು ಹಿಂಬಾಲಿಸಿ ರಸ್ತೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಗಾಯಗೊಂಡ ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫುಡ್ ಡೆಲಿವರಿ ಬಾಯ್‌ಗೆ ಹಿಗ್ಗಾಮುಗ್ಗಾ ಥಳಿತ: ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ಸಮೀಪ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಫುಡ್ ಡೆಲಿವರಿ ಬಾಯ್‌ಗೆ ನಾಲೈದು ಮಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸೌತ್ ಎಂಡ್ ಸರ್ಕಲ್ ಸಿಗ್ನಲ್ ಬಳಿಯೇ ಮನಸೋ ಇಚ್ಛೆ ಹಲ್ಲೆ ಮಾಡಿದ್ದು, ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.
ಇನ್ನೂ ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….