ದೊಡ್ಡಬಳ್ಳಾಪುರ, (ಆಗಸ್ಟ್.21); ನಗರ ಮತ್ತು ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಕುಂದುಕೊರತೆ ಸಭೆಯನ್ನು ಅಗಸ್ಟ್ 21ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್.ಪಿ.ವಿನಯ್‌ಕುಮಾರ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಮಾರುಕಟ್ಟೆ ಸಮೀಪದ ಬೆಸ್ಕಾಂ ಕಚೇರಿ ಆವರಣದಲ್ಲಿ ನಡೆಯಲಿರುವ ಕುಂದು ಕೊರತೆ ಸಭೆಯ ಅಧ್ಯಕ್ಷತೆಯನ್ನು ಶಾಸಕ ಧೀರಜ್ ಮುನಿರಾಜ್ ವಹಿಸಲಿದ್ದು, ನಗರ ಮತ್ತು ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….