ದೊಡ್ಡಬಳ್ಳಾಪುರ, (ಆಗಸ್ಟ್.21); ತಾಲೂಕಿನ ವಿವಿದೆಡೆಗಳಲ್ಲಿನ ಶ್ರೀ ರಾಘವೇಂದ್ರ ಸ್ವಾಮಿ ಮಠಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವವು ಶ್ರದ್ಧಾ ಭಕ್ತಿಗಳಿಂದ ನೆರವೇರಿತು.
ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರದಲ್ಲಿರುವ ಶ್ರೀ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನಾ ಸಂಭ್ರಮದಿಂದ ಮಹೋತ್ಸವ ನೆರವೇರಿತು.
ನಗರದ ಬ್ರಾಹ್ಮಣರ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆರಾಧನಾ ಮಹೋತ್ಸವದ ಅಂಗವಾಗಿ ರಾಯರ ಬೃಂದಾನವನಕ್ಕೆ ವಿಶೇಷ ಅಲಂಕಾರ,ವಿಶೇಷ ಪೂಜಾ, ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಹಸ್ರ ಶಂಖ ಕ್ಷೀರಾಭಿಷೇಕ, ರಾಘವೇಂದ್ರ ಸ್ತೋತ್ರ ಹೋಮ, ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್‍ಯಕ್ರಮಗಳು ನಡೆದವು.
ಆ.22 ರಂದು ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವ ಊರಿನ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.
ಆ.22ರವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಸಂಗೀತ ಕಚೇರಿಗಳಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….