ದೇವನಹಳ್ಳಿ, (ಆಗಸ್ಟ್.01): ವಿದೇಶದಿಂದ ನಗರಕ್ಕೆ ಅಕ್ರಮವಾಗಿ ಒಂದು ಕೋಟಿ ರೂ. ಮೌಲ್ಯದ ಚಿನ್ನ ಸಾಗಿಸಲು ಯತ್ನಿಸಿ ವ್ಯಕ್ತಿಯೊಬ್ಬ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸಮ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಮಲೇಶಿಯಾದ ಕೌಲಾಲಂಪುರದಿಂದ ಸೋಮ ವಾರ ಆಗಮಿಸಿದ್ದ ವಿಮಾನದಲ್ಲಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಯಿತು.
ಆರೋಪಿಯನ್ನು ಬಂಧಿಸಿ ಆತನಿಂದ 1.06 ಕೋಟಿ ರೂ ಮೌಲ್ಯದ 1.5 ಕೆಜಿ ಚಿನ್ನದ ಗಟ್ಟಿ ವಶಪಡಿಸಿ ಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….