ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ, (ಆಗಸ್ಟ್‌ 22): ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ  ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ.  ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ  ಪ್ರಧಾನಮಂತ್ರಿ ಅವರನ್ನು ಹಾಗೂ  ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.

 ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ.  ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ.  ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು. 

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ)  ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.  ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ  ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ  ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ.

ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ  ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ  ಬೇಡ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]