ಚಿಕ್ಕಮಗಳೂರು, (ಆಗಸ್ಟ್.22): ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಬಾವನ ಜೊತೆ ಸೇರಿ ಅಕ್ಕಂದಿರೇ ತಮ್ಮನನ್ನು ಕೊಚ್ಚಿ ಕೊಲೆಗೈದಿರುವ ಭೀಕರ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ.
ಮೃತ ದುರ್ದೈವಿಯನ್ನು ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯ 43 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ.
ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರು ಬಂದು, ಮಲಗಿದ್ದ ತಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….