ಕುಷ್ಟಗಿ, (ಆಗಸ್ಟ್ 23): ಅಕ್ಷರದಾಸೋಹ ಯೋಜನೆ ಮಧ್ಯಾಹ್ನದ ಬಿಸಿಯೂಟ ಸೇವಿಸಿ 80ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ–ಭೇದಿಯಿಂದ ಬಳಲಿ ಸುಸ್ತಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಬಿಜಕಲ್ ಗ್ರಾಮದಲ್ಲಿ ಜರುಗಿದೆ.
ಈ ದುರ್ಘಟನೆಯಲ್ಲಿ ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ದೋಟಿಹಾಳ ಪ್ರಾಥಮಿಕ ಆರೋಗ್ಯಕ್ಕೆ 40ಕ್ಕೂ ಅಧಿಕ ವಿದ್ಯಾರ್ಥಿಗಳು ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 500 ಕ್ಕೂ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಎಂದಿನಂತೆ ಶಾಲಾ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಶಾಲೆಯಲ್ಲಿಯೇ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ.
ಕೆಲವರಲ್ಲಿ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರು ಹೆದರಿಕೊಂಡು ಗ್ರಾಮದಲ್ಲಿ ಇವರು ಟಾಟಾ ಎಸಿ, ಟಂಟಂ ಸೇರದಂತೆ ಇನ್ನಿತರ ವಾಹನಗಳಲ್ಲಿ ದೋಟಿಹಾಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಗೆ ಮಕ್ಕಳನ್ನು ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕೂಡಲೇ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆಎಸ್ ರೆಡ್ಡಿ ಹಾಗೂ ದಂಡಿನ್ ಅವರ ನೇತೃತ್ವದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.
ಬಿಜಕಲ್ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಅಸ್ವಸ್ಥಗೊಂಡ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿ ಆನಂದ್ ಗೋಟರು ಗ್ರಾಮಕ್ಕೆ ಕುಷ್ಟಗಿಯ ಆಂಬುಲೆನ್ಸ್ ಸಮೇತ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಚಿಕಿತ್ಸೆ ಎಂದು ಆಸ್ಪತ್ರೆಗೆ ದಾಖಲಿಸಿ ಕೊಡುವ ಮೂಲಕ ಗ್ರಾಮದಲ್ಲಿಯೇ ಬಿಡು ಬಿಟ್ಟಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ಕ್ಷೇಮ ವಿಚಾರಿಸಿ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ವಿದ್ಯಾರ್ಥಿಗೆ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….