ಬೆಂಗಳೂರು ನಗರ ಜಿಲ್ಲೆ, (ಆಗಸ್ಟ್ 23): ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ವತಿಯಿಂದ 2024-25 ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಲದ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿಇಟಿ / ನೀಟ್ (CET/NEET) ವೃತ್ತಿಪರ ಕೋರ್ಸ್ ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ಅಂದರೆ ವೈದ್ಯಕೀಯ, (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್) ದಂತ ವೈದ್ಯಕೀಯ (ಬಿಡಿಎಸ್, ಎಂಡಿಎಸ್), ಆಯುಷ್(ಬಿ.ಆಯುಷ್, ಎಂ.ಆಯುಷ್) ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್) ಬ್ಯಾಚುಲರ್ ಆಪ್ ಆರ್ಕಿಟೆಕ್ಚರ್(ಬಿ.ಆರ್ಕ್, ಎಂ.ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences Food Nutrition and Dietetics, B.Pharma, M.Pharma Pharma D and D Pharma ಇಂತಹ ಪದವಿ ಕೋರ್ಸ್ ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್, ಪಾರ್ಸಿ ವಿದ್ಯಾರ್ಥಿಗಳು ಅರಿವು ರಿನ್ಯೂವಲ್ (Arivu Renewal) ಸಾಲದ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸದೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೆಬ್ ಸೈಟ್: WWW.Kmdconline.Karnataka.gov.in ನಲ್ಲಿ ಅಕ್ಟೋಬರ್ 31 ರೊಳಗೆ ಸಲ್ಲಿಸಬಹುದು ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್.2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22114817, ಸಹಾಯವಾಣಿ ಸಂಖ್ಯೆ: 8277799990 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….