ಬೆಂಗಳೂರು, (ಆಗಸ್ಟ್.23); ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಹಿಳೆಯರ ರಕ್ಷಣೆಯ ಪ್ರಶ್ನೆ ಎದುರಾಗಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಾಟ್ಸಪ್ ಮೆಸೇಜ್ ಒಂದು ವೈರಲ್ ಆಗುತ್ತಿದೆ. ಆದರೆ ಹರಿದಾಡುತ್ತಿರುವ ಸಂದೇಶ ಸುಳ್ಳಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈ ಸಂಬಂಧ ಇಲಾಖೆಯು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದು, ಅದರಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣದ ಕುರಿತು ಹರಿದಾಡುತ್ತಿರುವ ಸಂದೇಶವು FAKE ಆಗಿದೆ. ದಯವಿಟ್ಟು ಅಧಿಕೃತ ಮೂಲಗಳನ್ನು ಮಾತ್ರ ಅವಲಂಬಿಸಿ. ಯಾವುದೇ ತುರ್ತು ಪರಿಸ್ಥಿತಿಗಾಗಿ #112 ಅನ್ನು ಡಯಲ್ ಮಾಡಿ ಎಂದು ಮನವಿ ಮಾಡಿಕೊಂಡಿದೆ.
ವೈರಲ್ ಮೆಸೇಜ್ ಏನು..?; ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯೊಳಗೆ ಮನೆಗೆ ತೆರಳಲು ವಾಹನ ಸಿಗದೇ ಒಂಟಿಯಾಗಿರುವ ಯಾವುದೇ ಮಹಿಳೆ ಪೊಲೀಸ್ ಸಹಾಯವಾಣಿ ಸಂಖ್ಯೆಗಳನ್ನು (1091 ಮತ್ತು 7837018555) ಸಂಪರ್ಕಿಸಬಹುದಾದ ಉಚಿತ ಪ್ರಯಾಣ ಯೋಜನೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.
ವಾಹನವನ್ನು ಕೋರಬಹುದು ಮತ್ತು ವಿನಂತಿಸಬಹುದು. ಅವರು 24×7 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಯಂತ್ರಣ ಕೊಠಡಿಯ ವಾಹನ ಅಥವಾ ಹತ್ತಿರದ ಪಿಸಿಆರ್ ವಾಹನ/ಎಸ್‌ಎಚ್‌ಒ ವಾಹನವು ಅವನನ್ನು ಸುರಕ್ಷಿತವಾಗಿ ಅವನ ಗಮ್ಯಸ್ಥಾನಕ್ಕೆ ಕೊಂಡೊಯ್ಯುತ್ತದೆ. ಇದನ್ನು ಉಚಿತವಾಗಿ ಮಾಡಲಾಗುವುದು. ನಿಮಗೆ ತಿಳಿದಿರುವ ಎಲ್ಲರಿಗೂ ಈ ಸಂದೇಶವನ್ನು ಹರಡಿ.
ನಿಮ್ಮ ಹೆಂಡತಿ, ಹೆಣ್ಣುಮಕ್ಕಳು, ಸಹೋದರಿಯರು, ತಾಯಂದಿರು, ಸ್ನೇಹಿತರು ಮತ್ತು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರಿಗೆ ಸಂಖ್ಯೆಯನ್ನು ಕಳುಹಿಸಿ.. ಅದನ್ನು ಉಳಿಸಲು ಅವರನ್ನು ಕೇಳಿ.. ಎಲ್ಲಾ ಪುರುಷರು ದಯವಿಟ್ಟು ನಿಮಗೆ ತಿಳಿದಿರುವ ಎಲ್ಲಾ ಮಹಿಳೆಯರೊಂದಿಗೆ ಹಂಚಿಕೊಳ್ಳಿ.
ತುರ್ತು ಸಂದರ್ಭಗಳಲ್ಲಿ ಮಹಿಳೆಯರು ಖಾಲಿ ಸಂದೇಶ ಅಥವಾ ಮಿಸ್ ಕಾಲ್ ನೀಡಬಹುದು. ಇದರಿಂದ ಪೊಲೀಸರು ನಿಮ್ಮ ಸ್ಥಳವನ್ನು ಪತ್ತೆ ಹಚ್ಚಬಹುದು ಮತ್ತು ನಿಮಗೆ ಸಹಾಯ ಮಾಡಬಹುದು. ಭಾರತದಾದ್ಯಂತ ಅನ್ವಯಿಸುತ್ತದೆ ಎಂಬ ಮೆಸೇಜ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….