ಮುದಗಲ್, (ಆಗಸ್ಟ್.24): ಕೌಟುಂಬಿಕ ಕಲಹ ಉಲ್ಬಣಿಸಿ ತನ್ನ ಅಜ್ಜಿ ಹಾಗೂ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ. ದ್ಯಾಮಮ್ಮ (66) ಹಾಗೂ ಜ್ಯೋತಿ (23) ಕೊಲೆಯಾದ ದುರ್ದೈವಿಗಳು.
ದುರಗಪ್ಪ ಆರೋಪಿ. ಮುದಗಲ್‌ನ ಸಮು ದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರ ದುರಗಪ್ಪನ ಕುಟುಂಬ ಆಸ್ಪತ್ರೆಯ ವಸತಿಗೃಹದಲ್ಲಿ ವಾಸವಾಗಿತ್ತು. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರಗಪ್ಪ ಮದ್ಯ ಸೇವಿಸಿ ಬಂದು ಅಜ್ಜಿ ಹಾಗೂ ಹೆಂಡತಿಗೆ ಮನಸೋಇಚ್ಛೆ ಥಳಿಸುತ್ತಿದ್ದ ಎಂದು ಗೊತ್ತಾಗಿದೆ.
ಈಗ ಇಬ್ಬರನ್ನೂ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಮುದಗಲ್ ಪೊಲೀಸ್ ರು ಬಂಧಿಸಿದ್ದಾರೆ.
ಸ್ಥಳಕ್ಕೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಸಿಂಧನೂರು ಡಿವೈಎಸ್ಪಿ ಬಿ, ಎಸ್, ತಳವಾರ, ಮಸ್ಕಿ ಸಿಪಿಐ ಬಾಲಚಂದ್ರ ಲಕಂ, ಪಿಎಸ್‌ಐ ವೆಂಕಟೇಶ ಭೇಟಿ ನೀಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….