ಬೆಂಗಳೂರು, (ಆಗಸ್ಟ್. 23): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖಾಧಿಕಾರಿ ಸುಮಾರಾಣಿ ಅವರಿಂದ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಆ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ದ ಮೊದಲ ಚಾರ್ಜ್ ಶೀಟ್ ಇದಾಗಿದೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2 ಸಾವಿರ ಪುಟಗಳ ಚಾರ್ಜ್ರಶೀಟ್ ಅಧಿಕಾರಿಗಳು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇನ್ನು ಇನ್ನೊಂದು ಕಡೆ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದವು.
ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಆವಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಪ್ರಜ್ವಲ್‌ರನ್ನು ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಇನ್ನು ಇತ್ತೀಚೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರಿಂದ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿದ್ದಾರೆ. ಸದ್ಯ ಪರಪ್ಪನ ಆಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….