ದೊಡ್ಡಬಳ್ಳಾಪುರ, (ಆಗಸ್ಟ್.24); ಮೂರನೇ ಶ್ರಾವಣ ಶನಿವಾರದ ಅಂಗವಾಗಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸಾಸಲು ಹೋಬಳಿಯ ಗುಟ್ಟೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಮುಂಜಾನೆಯಿಂದಲ್ಲೇ ಭಕ್ತರು ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ
ಶ್ರಾವಣ ಶನಿವಾರದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ,ಪ್ರಸಾದ ವಿನಿಯೋಗ ಕೈಗೊಳ್ಳಲಾಗಿದೆ.
ಅಂತೆಯೇ ಮಧುರೆ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯ, ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ, ನಗರದ ತೇರಿನ ಬೀದಿಯಲ್ಲಿನ ಶ್ರೀ ಪ್ರಸನ್ನ ವೆಂಕಟರಮಣ ದೇವಾಲಯ, ಶ್ರೀ ನೆಲದಾಂಜನೇಯ, ರಾಜಘಟ್ಟ ಗ್ರಾಮದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯ, ಅರಳು ಮಲ್ಲಿಗೆಯ ಶ್ರೀ ಲಕ್ಷ್ಮೀ ಚನ್ನಕೇಶವ ಸ್ವಾಮಿ ದೇವಾಲಯ.
ಮೆಳೇಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಾಲಯ, ಹೊಸಹಳ್ಳಿಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ಮಲ್ಲೋಹಳ್ಳಿ ಶ್ರೀ ಲಕ್ಷ್ಮೀ ರಂಗನಾಥ ದೇವಾಲಯ, ಹುಲಿಕುಂಟೆ ವರಪ್ರಧ ಬೇಟೆ ರಂಗನಾಥ ಸ್ವಾಮಿ ದೇವಾಲಯ, ಖಾಸ್ ಬಾಗ್ ರಥಸಪ್ತಮಿ ಶ್ರೀ ಶನೇಶ್ಚರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಸಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….