ದೊಡ್ಡಬಳ್ಳಾಪುರ, (25): ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ಆ.26 ರಂದು ನಗರದ ಗಾಂಧಿ ನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ದೇವಾಲಯದಲ್ಲಿ ಬೆಳಗ್ಗೆ 6ಕ್ಕೆ ಅಭಿಷೇಕ, ವಿಶೇಷ ಅಲಂಕಾರ, 10.30ಕ್ಕೆ ಭಜನೆ, ಸಂಜೆ 4.30ಕ್ಕೆ ವಿಷ್ಣು ಸಹಸ್ರ ಪಾರಾಯಣ, 6 ಗಂಟೆಗೆ ಬಾಲ ಕೃಷ್ಣ ಲೀಲ ಅಂಗವಾಗಿ ಮಕ್ಕಳ ಕೃಷ್ಣ ರಾಧೆ ವೇಷಭೂಷಣ ಪ್ರದರ್ಶನ, 7 ಗಂಟೆ ಭರತ ನಾಟ್ಯ ಮೊದಲಾದ ಕಾರ್ಯಕ್ರಮಗಳಿವೆ
ನಗರದ ಕೆರೆಬಾಗಿಲು ರಸ್ತೆಯ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ಆ.26 ರಂದು ವಿಶೇಷ ತೊಟ್ಟಿಲು ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….