ದೊಡ್ಡಬಳ್ಳಾಪುರ, (ಆಗಸ್ಟ್.25): AIDSO ನ ರಾಜ್ಯಮಟ್ಟದ ಕಾರ್ಯಕರ್ತರ ಶಿಬಿರದ ಎರಡನೇ ದಿನವಾದ ಇಂದು ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಕುರಿತು SUCI(ಕಮ್ಯುನಿಸ್ಟ್) ಪಕ್ಷದ ಕೇಂದ್ರ ಸಮಿತಿಯ ಸದಸ್ಯರು ಹಾಗೂ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಕೆ.ಉಮಾ ಅವರು ಭಾಗವಹಿಸಿದ್ದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಸ್ಕೃತಿಕವಾಗಿ ಹದಗೆಡುತ್ತಿರುವ ಇಂದಿನ ಸಮಾಜದ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ. ಚಿಕ್ಕವಯಸ್ಸಿನ ಮಕ್ಕಳು ಸಹ ಅನೇಕ ದುಶ್ಚಟಗಳಿಗೆ ಬಲಿಯಾಗಿ ಕುಸಂಸ್ಕೃತಿ ಹೆಚ್ಚಾಗುತ್ತಿದ್ದಾರೆ, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯು ವಿದ್ಯಾರ್ಥಿಗಳ ಸಾಂಸ್ಕೃತಿಕ ಬೆನ್ನೆಲುಬನ್ನು ಮುರಿಯಲು ದೃಶ್ಯ ಮಾಧ್ಯಮದ ಮೂಲಕ ಅಶ್ಲೀಲತೆಯನ್ನು ಬಿತ್ತುತ್ತಿದೆ. ಇದಕ್ಕೆ ಪರ್ಯಾಯವಾಗಿ ಉನ್ನತ ನೀತಿ-ನೈತಿಕತೆಯನ್ನು ಬಿತ್ತಲು ಶರತ್ ಚಂದ್ರರ ಸಾಹಿತ್ಯವು ಮಹತ್ವದ ಪಾತ್ರವನ್ನು ವಹಿಸುತ್ತದೆ.
ಇಂತಹ ಸಂದರ್ಭದಲ್ಲಿ ಮಕ್ಕಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಜೊತೆಗೆ ನಿಸ್ವಾರ್ಥ ಮೌಲ್ಯಗಳನ್ನು ಚಂದ್ರನ ಉದ್ದೇಶದಿಂದ ಶರತ್ ಪ್ರಖ್ಯಾತ ಕಾದಂಬರಿಗಳಾದ ಅಧಿಕಾರ, ಶ್ರೀಕಾಂತ, ಹೀಗೆ ಹಲವು ಕಥೆಗಳನ್ನು ಮಕ್ಕಳಿಗೆ ಹೇಳುತ್ತಾ ಸಾಹಿತ್ಯದಲ್ಲಿರುವ ವ್ಯಕ್ತಿತ್ವಗಳು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸುತ್ತದೆ. ಇಂತಹ ಸಮಾಜಮುಖಿಯಾಗಿರುವ ಕಥೆ, ಕಾದಂಬರಿಗಳನ್ನು ಓದುವ ಮೂಲಕ ಅನ್ಯಾಯದ ವಿರುದ್ಧ ಹೋರಾಟವನ್ನು ಬಲಿಷ್ಟವಾಗಿ ಕಟ್ಟಲು ಅಸ್ತ್ರವನ್ನಾಗಿಸಿಕೊಳ್ಳಬೇಕು ಎಂದರು.
ಎಐಡಿಎಸ್‌ಓ ರಾಜ್ಯ ಖಜಾಂಚಿ ಸುಭಾಷ್ ಮಾತನಾಡಿ, ಶರತ್ ಚಂದ್ರರ ನಿಸ್ವಾರ್ಥ ತಾಯ್ತನ ಕುರಿತಾದ ರಾಮನ ಬುದ್ದಿವಂತಿಕೆ ಕಥೆಯನ್ನು ಹೇಳಿದರು. ಶಿಬಿರದಲ್ಲಿ ಹಾಡು, ನಾಟಕ ಹಾಗೂ ನೃತ್ಯ ಕಾರ್ಯಗಾರಗಳು ನಡೆದವು.
ಈ ಸಂದರ್ಭದಲ್ಲಿ ಎಐಡಿಎಸ್‌ಓ ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ.ಎಸ್., ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಉಪಾಧ್ಯಕ್ಷರಾದ ಹಣಮಂತು ಹೆಚ್.ಎಸ್, ಅಭಯ ದಿವಾಕರ್, ಅಪೂರ್ವ, ಚಂದ್ರಕಲಾ, ರಾಜ್ಯ ಖಜಾಂಚಿ ಸುಭಾಷ್, ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಸೇರಿದಂತೆ ಜಿಲ್ಲೆಯ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….