ಬೆಂಗಳೂರು, (ಆಗಸ್ಟ್ 27); ಮಾದಕವಸ್ತು ಕಳ್ಳಸಾಗಾಣಿಕೆ ಪತ್ತೆ ಕಾರ್ಯದಲ್ಲಿ ಪೊಲೀಸರ ಜೊತೆಯಲ್ಲಿ ಸಾಕಷ್ಟು ಪ್ರಕರಣಗಳಲ್ಲಿ ಕಾರ್ಯನಿರ್ವಹಿಸಿದ್ದ ಮಿಕಿ ಎಂಬ ಶ್ವಾನ ಅಕಾಲಿಕವಾಗಿ ಸಾವನ್ನಪ್ಪಿರುವುದಕ್ಕೆ ಬೆಂಗಳೂರು ಪೊಲೀಸರು ಬೇಸರ ವ್ಯಕ್ತಪಡಿಸಿದ್ದಾರೆ.
ನಗರದ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕವಾಯತು ಸಂದರ್ಭದಲ್ಲಿ ತರಬೇತುದಾರ ಪೊಲೀಸ್ ರೊಂದಿಗೆ ಮಿಕಿ ಅಭ್ಯಾಸ ನಡೆಸುತ್ತಿದ್ದ ಫೊಟೊ, ಸರ್ಕಾರಿ ಗೌರವಗಳೊಂದಿಗೆ ಶ್ವಾನದ ಅಂತ್ಯ ಸಂಸ್ಕಾರದ ಪೋಟೊವನ್ನು ಬೆಂಗಳೂರು ಕೆ9 ಕಾಪ್ಸ್ ಎಂಬ ತುಕುಡಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಸರ್ಕಾರಿ ಗೌರವಗಳೊಂದಿಗೆ ಈ ಮಿಕಿ ಶ್ವಾನದ ಅಂತ್ಯ ಸಂಸ್ಕಾರವನ್ನು ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….