ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, (ಆಗಸ್ಟ್.27); ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. 

ಗಾಂಧಿನಗರ ವಿಧಾನಸಭಾ ಕ್ಷೇತ್ರದ  ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು. 

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು,  ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು. 

ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ:ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. 

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ

ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು ಪೀಠದ ಬಳಿ ಬಂದು ಪ್ರತಿಭಟನೆ ಮಾಡಿದರೆ ಅವರನ್ನು ಅಮಾನತು ಮಾಡಲಾಗುತ್ತದೆ. R.Ashoka

[ccc_my_favorite_select_button post_id="104872"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
ಬಾಲಕನ ಜೀವ ಉಳಿಸಲು ಹೋಗಿ ಜಲಾಶಯದಲ್ಲಿ ಮುಳುಗಿ ಮೂವರು ಜಲಸಮಾಧಿ

ಬಾಲಕನ ಜೀವ ಉಳಿಸಲು ಹೋಗಿ ಜಲಾಶಯದಲ್ಲಿ ಮುಳುಗಿ ಮೂವರು ಜಲಸಮಾಧಿ

ಮಧ್ಯಾಹ್ನ ಊಟ ಮಾಡೋಣ ಅಂತ ಜಲಾಶಯದ ಬಂಡೆ ಮೇಲೆ ಕೂತು ಊಟ ಮಾಡೋಕೆ ಮುಂದಾಗಿದ್ರು boy

[ccc_my_favorite_select_button post_id="104875"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!