ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 27,2024): ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.
35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದಕ್ಕೆ ಸೆಪ್ಟೆಂಬರ್ 05 ವರೆಗೆ ದಿನ ವಿಸ್ತರಿಸಲಾಗಿದೆ. ಆಸಕ್ತರು ಅರ್ಜಿಯನ್ನು ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಸಲ್ಲಿಸುವುದು. ಈ ಸಂಬಂಧ ಸಂದರ್ಶನವನ್ನು ಸೆಪ್ಟೆಂಬರ್ 10 ರಂದು ನಡೆಸಲಾಗುವುದು.
ಅರ್ಜಿ ನಮೂನೆಯನ್ನು ರಂಗಾಯಣದ ವೆಬ್ಸೈಟ್: rangayanamysore.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಸಂದರ್ಶನದ ವೇಳೆ ಹಾಜರುಪಡಿಸಬೇಕಾದ ಮೂಲ ದಾಖಲಾತಿಗಳು-ಜನ್ಮ ದಿನಾಂಕ ದೃಢೀಕರಣ ಪತ್ರ , ಎನ್.ಎಸ್.ಡಿ / ಡಿಪ್ಲೊಮೋ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ (ಅಗತ್ಯ ದಾಖಲೆಗಳೊಂದಿಗೆ), ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಮೈಸೂರು ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….