ಬೆಂಗಳೂರು. (ಆಗಸ್ಟ್ 28); ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಒಳಮೀಸಲಾತಿ ಜಾರಿಯ ಕುರಿತು ಇಂದು ಗೃಹ ಕಛೇರಿ ಕಾವೇರಿಯಲ್ಲಿ ಸಭೆಯನ್ನು ನಡೆಸಿದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ನವರು ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರವರ ಉಪಸ್ಥಿತಿಯಲ್ಲಿ ಮಾದಿಗ ಸಮುದಾಯದ ಮಾಜಿ ಸಚಿವರು, ಶಾಸಕರು ಸಮ್ಮುಖದಲ್ಲಿ ಸಭೆಯನ್ನು ನಡೆಸಿದರು.
ಒಳಮೀಸಲಾತಿ ಜಾರಿಯವಿಚಾರದಲ್ಲಿ ನಾನು ಬದ್ದನಾಗಿದ್ದೇನೆ, ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ ನಂತರ ಕ್ಯಾಬಿನೆಟ್ ಮೂಲಕ ಇದಕ್ಕೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸಭೆಯಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ರಾಜ್ಯ ಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಶಾಸಕರಾದ ಎನ್ ಶ್ರೀನಿವಾಸ,ಬಸವಂತಪ್ಪ, ಡಾ.ತಿಮ್ಮಯ್ಯ ,ಶಿವಣ್ಣ, ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….