ದೊಡ್ಡಬಳ್ಳಾಪುರ, (ಆಗಸ್ಟ್.27); ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಂ. ನಾರಾಯಣಸ್ವಾಮಿ ಅವರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
ಈ ವರ್ಷ ಕರ್ನಾಟಕದ ಇಬ್ಬರಿಗೆ ರಾಷ್ಟ್ರಿಯ ಪ್ರಶಸ್ತಿ ಒಲಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ. ನಾರಾಯಣಸ್ವಾಮಿ ಹಾಗೂ ಮೈಸೂರು ಜಿಲ್ಲೆಯ ಹುಣಸೂರು ಮಹಿಳಾ ಪಿಯು ಕಾಲೇಜಿನ ಉಪನ್ಯಾಸಕರಾಗಿರುವ ಹೆಚ್ಎನ್ ಗಿರೀಶ್ ಎಂಬುವವರಿಗೆ ರಾಷ್ಟ್ರಿಯ ಪ್ರಶಸ್ತಿ ಲಭಿಸಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತಪಸೀಹಳ್ಳಿ ಗ್ರಾಮದವರಾದ ಎಂ.ನಾರಾಯಣಸ್ವಾಮಿ ಅವರು, ಪ್ರಾಥಮಿಕ ಶಾಲೆ ಶಿಕ್ಷಕರಾಗಿ ನಂತರ ಪ್ರೌಢಶಾಲೆ ಶಿಕ್ಷಕರಾಗಿ ಪ್ರಸ್ತುತ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಾ, ಶಾಲೆಯ ಅಭಿವೃದ್ಧಿಗೆ ಮಹತ್ತರ ಪಾತ್ರ ವಹಿಸಿದ್ದಾರೆ.
ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು 1958 ರಲ್ಲಿ ಸ್ಥಾಪಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಭಾನ್ವಿತ ಶಿಕ್ಷಕರಿಗೆ ಸಾರ್ವಜನಿಕ ಮನ್ನಣೆ ನೀಡಲು ಪ್ರಶಸ್ತಿ ನೀಡಲಾಯಿತು.
ಈ ರಾಷ್ಟ್ರ ಪ್ರಶಸ್ತಿಯು ದೇಶದ ಕೆಲವು ಅತ್ಯುತ್ತಮ ಅಧ್ಯಾಪಕರ ವಿಶಿಷ್ಟ ಕೊಡುಗೆಗಳನ್ನು ಗುರುತಿಸುವುದು ಮತ್ತು ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಅವರನ್ನು ಗೌರವಿಸಲು ನೀಡುವುದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….