ಬೆಂಗಳೂರು, (ಆಗಸ್ಟ್.29); ಅಂಗಡಿ ಮುಂದೆ ಕಾರು ನಿಲ್ಲಿಸಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೊಂಡೆಕುಪ್ಪದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 17 ವರ್ಚದ ರೆಹಮಾನ್ ಎಂದು ಗುರುತಿಸಲಾಗಿದೆ.
ಸೊಂಡೆಕುಪ್ಪ ಗ್ರಾಮದ ರೇಣುಕಾ ಹಾಗೂ ಪರ್ಮಿ ಎಂಬುವವರು ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೇಕರಿಗೆ ಹೋಗಿದ್ದರು.
ಈ ವೇಳೆ ಕಾರನ್ನು ಮೃತ ರೆಹಮಾನ್ ಅಂಗಡಿಯ ಮುಂದೆ ನಿಲ್ಲಿಸಿದ್ದಾರೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಾತಿಗೆ ಮಾತು ಬೆಳೆದ ಪರಿಣಾಮ ಆರೋಪಿಗಳಾದ ರೇಣುಕಾ ಹಾಗೂ ಪರ್ಮಿ ಎಂಬವರು ಕಾರಿನಲ್ಲಿದ್ದ ಚಾಕು ಹಾಗೂ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ.
ಇದ್ಯಾವುದಕ್ಕೂ ರೆಹಮಾನ್ ಹೆದರದ ಹಿನ್ನಲೆ ಚಾಕುವಿನಿಂದ ಎದೆಯ ಭಾಗಕ್ಕೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಸದ್ಯ ಆರೋಪಿ ರೇಣುಕಾನನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮತ್ತೋರ್ವನಿಗಾಗಿ ಬಲೆ ಬೀಸಿದ್ದಾರೆಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….