ಮಂಗಳೂರು, (ಆಗಸ್ಟ್ 30): ಶ್ರೀಕೃಷ್ಣ ಜನ್ಮಾಷ್ಟಮಿಯ ಮೆರವಣಿಗೆ ವೇಳೆ ಯುವಕರ ಗುಂಪೊಂದು ಒಂಟಿ ಯುವತಿಯೊಂದಿಗೆ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಧಾರ್ಮಿಕ ಆಚರಣೆ ವೇಳೆ ಕೇಸರಿ ಶಾಲು ಹಾಕಿದ್ದ ಯುವಕನೋರ್ವ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ಬಗ್ಗೆ ನೆಟ್ಟಿಗರು ಕಿಡಿಕಾರಿದ್ದಾರೆ.
ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ದಿನ ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ಹುಲಿವೇಷ ಸೇರಿದಂತೆ ವಿವಿಧ ವೇಷಗಳನ್ನು ಧರಿಸಿ ಪ್ರದರ್ಶನ, ನೃತ್ಯ ಮೆರವಣಿಗೆ ಸಾಗಿ ಹಬ್ಬವನ್ನಾಚರಿಸುತ್ತಾರೆ. ಆದರೆ ಧಾರ್ಮಿಕ ಮೆರವಣಿಗೆಯಲ್ಲಿ ಯುವಕರು ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿ ಹುಚ್ಚಾಟ ಮೆರೆದಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದಾರೆ.
ವೈರಲ್ ವಿಡಿಯೋದಲ್ಲಿ ಯುವಕರ ಗುಂಪಿನ ನಡುವೆ ಒಂಟಿ ಯುವತಿಯೊಬ್ಬಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡಿದ್ದ ಯುವಕನೊಬ್ಬ ಆಕೆಯನ್ನು ತಬ್ಬಿಕೊಂಡು ಅಶ್ಲೀಲವಾಗಿ ವರ್ತಿಸಿದ್ದಾನೆ. ಈ ವೇಳೆ ಇರುಸುಮುರುಸುಗೊಂಡ ಯುವತಿ ಆತನನ್ನು ದೂರ ಸರಿಸಿ ಅಲ್ಲಿಂದ ಬೇರೆಡೆ ಹೋಗಲು ಪ್ರಯತ್ನಿಸಿರುವುದು ಕಂಡುಬಂದಿದೆ.
ಈ ವಿಡಿಯೋವನ್ನು ಹಂಚಿಕೊಂಡಿರುವ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಇದೇನಾ ಧರ್ಮ ಪ್ರೇಮ ಅಥವಾ ದೇಶಪ್ರೇಮ ಅಂದ್ರೆ ಭೀಮಾರು ಕಡೆ ನೋಡುತಿದ್ವಿ ಅದು ಇಲ್ಲಿಗೂ ಬಂತಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….