![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಉಡುಪಿ, (ಆಗಸ್ಟ್ 31); ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ ಅವರು ಇಂದು ತಾಯಿ ಮತ್ತು ಮಡದಿಯೊಂದಿಗೆ ಉಡುಪಿಗೆ ಆಗಮಿಸಿದ್ದು, ನಗರದ ಪ್ರಸಿದ್ಧ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಜ್ಯೂ.ಎನ್‌ಟಿಆರ್ ಅವರು ತಮ್ಮ ತಾಯಿ ಶಾಲಿನಿ ನಂದಮೂರಿ, ಮಡದಿ ಲಕ್ಷ್ಮೀ ಪ್ರಣತಿ ಅವರೊಂದಿಗೆ ಉಡುಪಿಗೆ ಆಗಮಿಸಿ ದೇವರ ದರ್ಶನ ಪಡೆದರು.
ನಂತರ ಮಾತನಾಡಿ, ತಾಯಿ ಶಾಲಿನಿ ಅವರು ಸುಮಾರು 40 ವರ್ಷಗಳ ಹಿಂದೆ ಮಗನನ್ನು ಉಡುಪಿಯ ಶ್ರೀ ಕೃಷ್ಣನ ಸನ್ನಿಧಿಗೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರು. ಈ ಹಿನ್ನೆಲೆ ಮಠಕ್ಕೆ ಆಗಮಿಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದಿದ್ದಾರೆ. ಈ ಮೂಲಕ ಕನಸು ನೆರವೇರಿದೆ ಎಂದು ಎನ್‌ಟಿಆರ್ ತಿಳಿಸಿದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಈ ವೇಳೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶೀರ್ವಾದ, ಅನುಗ್ರಹ ಮಂತ್ರಾಕ್ಷತೆ ಹಾಗೂ ಕೋಟಿಗೀತಾ ಲೇಖನ ಯಜ್ಞದೀಕ್ಷೆ ಪಡೆದರು.
ತೆಲುಗು ನಟನೊಂದಿಗೆ ಕನ್ನಡದ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿದ್ದರು.
ತಮ್ಮ ತಾಯಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನವರು ಎಂದು ಜ್ಯೂ ಎನ್‌ಟಿಆರ್ ಹಲವು ಬಾರಿ ವಾಹಿನಿಗಳ ಸಂದರ್ಶನಗಳಲ್ಲಿ ತಿಳಿಸಿದ್ದನ್ನ ಸ್ಮರಿಸಬಹುದಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….