ದೊಡ್ಡಬಳ್ಳಾಪುರ, (ಸೆ.01); ತಾಲೂಕಿನ ತೂಬಗೆರೆ ಹೋಬಳಿ ವಾಸುದೇವನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಿ.ಆರ್.ಕೃಷ್ಣರಾವ್ (57 ವರ್ಷ) ಅವರು ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ, ನಗರದ ಹೊರವಲಯದ ಮುಕ್ತಿ ಧಾಮದಲ್ಲಿ ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಿ.ಆರ್.ಕೃಷ್ಣರಾವ್ ನಿಧನಕ್ಕೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕ್ಷೇತ್ರ ಶಿಕ್ಷಣಾಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….