Site icon Harithalekhani

ಸೆ.1 (ಇಂದು) ಆರೋಗ್ಯ ಇಲಾಖೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ದೊಡ್ಡಬಳ್ಳಾಪುರ, (ಸೆ.01): ಬೆಂಗಳೂರು ಗ್ರಾಮಾಂತರ ಜಿಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸೆ.1 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ. 

ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಜಿ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆ ವಹಿಸಲಿದ್ದಾರೆ. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಡಾ.ಕೆ. ಸುಧಾಕರ್, ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಶ್ರೀನಿವಾಸ, ಎಂ.ಟಿ.ಬಿ.ನಾಗರಾಜ್, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಲಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version