ನೆಲಮಂಗಲ, (ಸೆ.01): ಲಾರಿ ರಿವರ್ಸ್ ತೆಗೆದುಕೊಳ್ಳುವಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆತನ ತಾಯಿಗೆ ಗಂಭೀರಗಾಯಗಳಾಗಿರುವ ದುರ್ಘಟನೆ ದಾಬಸ್ಟೇಟೆಯಲ್ಲಿ ಇಂದು ನಡೆದಿದೆ.
ಅಪಘಾತದಲ್ಲಿ ಚಿತ್ರದುರ್ಗದ ನಿವಾಸಿ 20 ವರ್ಷದ ಕುಶಾಲ್ ಸ್ಥಳದಲ್ಲಿ ಮೃತಪಟ್ಟಿದ್ದು, ಆತನ ತಾಯಿ ಮಮತಾ (45) ಎಂಬುವವರ ಸ್ಥಿತಿ ಗಂಭೀರಾವಾಗಿದೆ ಎಂದು ತಿಳಿದುಬಂದಿದೆ.
ಲಾರಿ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಬೈಕ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ವೇಳೆ ಕುಶಾಲ್ ಸ್ಥಳದಲ್ಲಿ ಅಸುನೀಗಿದ್ದಾರೆ.
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಮೇಲ್ನೋಟಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ.
ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….